ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅರೆಸ್ಟ್

ಮಂಗಳೂರು:ಮಾ. 23. 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.

ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.

ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌, ಸಿಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದೆ.

No Comments

Leave A Comment