ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ.

ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ಬಿಜೆಪಿ ಸ್ವತಂತ್ರ್ಯವಾಗಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಬಿಜೆಪಿಯ ವಿಶಾಲ್ ದರ್ಗಿ ಅವರು ಆಯ್ಕೆಯಾದರೆ ಉಪ ಮೇಯರ್ ಆಗಿ ಶಿವಾನಂದ್ ಪಿಸ್ತಿ ಆಯ್ಕೆಯಾಗಿದ್ದಾರೆ. ಈ ಮೂಲಕ 12 ವರ್ಷಗಳ ಬಳಿಕ ಬಿಜೆಪಿ ಕಲಬುರಗಿ ಪಾಲಿಕೆಯ ಗದ್ದುಗೆಗೇರಿದೆ.

ವಿಶಾಲ್ ದರ್ಗಿ 33 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕಪನೂರ್ ಮತಗಳನ್ನು ಪಡೆದಿದ್ದಾರೆ. ಇನ್ನು ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ಶಿವಾನಂದ್ ಪಿಸ್ತಿ 33 ಮತಗಳನ್ನು ಪಡೆದರೆ ಕಾಂಗ್ರೆಸ್ ನ ವಿಜಯಲಕ್ಷ್ಮಿ 32 ಮತಗಳನ್ನು ಪಡೆದಿದ್ದಾರೆ.

2021ರ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. ಬಿಜೆಪಿ 23, ಕಾಂಗ್ರೆಸ್ 27, ಜೆಡಿಎಸ್ 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

No Comments

Leave A Comment