Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಚಿಕ್ಕೋಡಿ : ಇಬ್ಬರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಸಾವು

ಚಿಕ್ಕೋಡಿ: ದೇವರಿಗೆ ನೈವೇದ್ಯ ಕೊಟ್ಟು ಬರುತ್ತಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದಿದೆ.

ಶ್ರೀಧರ್ ಪಾರಿಸ್ ಹೊಸೂರು (15) ಹಾಗೂ ಹರ್ಷಿತಾ ಶೀತಲ ಚಿಪ್ಪಾಡಿ (8) ಮೃತ ಮಕ್ಕಳು. ಯುಗಾದಿ ಹಬ್ಬದ ಪ್ರಯುಕ್ತ ದೇವರ ದರ್ಶನಕ್ಕೆ ಹೋಗಿದ್ದ ಮಕ್ಕಳು ಮರಳಿ ಬರುತ್ತಿದ್ದಾಗ ಪ್ಲೇಟ್ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ದುರ್ಮರಣಕ್ಕೀಡಾಗಿದ್ದಾರೆ. ಹರ್ಷಿತಾಳನ್ನು ರಕ್ಷಿಸಲು ಹೋಗಿ ಶ್ರೀಧರ್ ಕೂಡಾ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.

ನಡೆದ ಈ ಹೃದಯವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment