Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದರಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.  ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

No Comments

Leave A Comment