ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ತಡೆಗೋಡೆ ನಿರ್ಮಾಣದ ವೇಳೆ ಕುಸಿದ ಮಣ್ಣು: ಮೂವರು ಕಾರ್ಮಿಕರ ದಾರುಣ ಸಾವು
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಮಣ್ಣು ಕುಸಿದಿದ್ದು ಇಬ್ಬರು ಪುರುಷರು ಹಾಗೂ ಓರ್ವ ಮಹಿಳಾ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ್ದರು.
ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಜೆಸಿಬಿ ಸಹಾಯದಿಂದ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಮೂವರು ಕಾರ್ಮಿಕರ ಮೃತದೇಹವನ್ನು ಹೊರತೆಗೆಯಲಾಗಿದೆ. ಮೃತಪಟ್ಟವರ ಪೈಕಿ ಇಬ್ಬರ ಗುರುತು ಸಿಕ್ಕಿದ್ದು ಗದಗದ ಮುಂಡರಗಿ ಮೂಲದ ಶಾಂತಾ ಹಾಗೂ ಸೋಮಶೇಖರ್ ದಂಪತಿ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.