ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕೊಚ್ಚಿಯಲ್ಲಿ ಟೇಕ್ ಆಫ್ ಆದ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

ಕೊಚ್ಚಿ:ಮಾ 26. ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದ್ದು, ಹೆಲಿಕಾಪ್ಟರ್ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು ಎಂದು ತಿಳಿದು ಬಂದಿದೆ.

ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆಯ ಬಳಿಕ ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು. ವಿಮಾನಗಳನ್ನು ಹತ್ತಿರದ ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಯಿತು.

ಇನ್ನು ಮಧ್ಯಾಹ್ನ 12.30ರ ಸುಮಾರಿಗೆ ತರಬೇತಿ ಹಾರಾಟದ ಸಮಯದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾದ ನಂತರ ಈ ಘಟನೆ ನಡೆದಿದೆ.

No Comments

Leave A Comment