ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ
ಮಂಗಳೂರು:ಮಾ 26. ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ನಡೆದಿದೆ.
ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ.
ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು ಮತ್ತು ಕೆಲವರ ಮೇಲೆ ಹಲ್ಲೆಗೂ ಯತ್ನಿಸಿರುವುದಾಗಿ ವರದಿಯಾಗಿದೆ.
ಇನ್ನು ಪೊಲೀಸರು ಮಧ್ಯ ಪ್ರವೇಶಿಸಿ ಭಜರಂಗದಳ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.