ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!
ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ ಸೋಮವಾರ ಆದೇಶ ನೀಡಿದೆ. ಪರಿಣಾಮವಾಗಿ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಿಸುವಂತಾಗಿದೆ.
ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.
ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು.