Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಹಾಸನ: ಕುರಾನ್ ಪಠಣ ವಿರೋಧಿಸಿ ಪ್ರತಿಭಟನೆ; ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕುರಾನ್ ಪಠಣ ವಿರೋಧಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿಶ್ವ ವಿದೂ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬೈಕ್ ನಲ್ಲಿ ಬಂದ ಮುಸ್ಲಿಂ ಸಮುದಾಯದ ಯುವಕ ಕುರಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.

ಹಿಂದೂ ಧಾರ್ಮಿಕ ಜಾತ್ರೆಯಲ್ಲಿ ಕುರಾನ್ ಪಠಿಸಬಾರದು ಎಂದು ಆಗ್ರಹಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಏಪ್ರಿಲ್ 3 ರೊಳಗೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ, ಹಿಂದೂ ಕಾರ್ಯಕರ್ತರ ವಿರೋಧದ ನಡುವೆ, ಚನ್ನಕೇಶವ ಜಾತ್ರೆಯಲ್ಲಿ ಕುರಾನ್ ಪಠಣವನ್ನು ನಡೆಸಲಾಯಿತು. ಆದಾಗ್ಯೂ, ಹಿಂದೂ ದೇವರ ಮುಂದೆ ಕುರಾನ್ ಪಠಣವನ್ನು 1932 ರಲ್ಲಿ ಬಲವಂತವಾಗಿ ಸೇರಿಸಲಾಯಿತು ಎಂದು ಹಿಂದೂ ಕಾರ್ಯಕರ್ತರು ಪ್ರತಿಪಾದಿಸುತ್ತಿದ್ದಾರೆ.

No Comments

Leave A Comment