ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆ: ಕೆಂಪು ಕೋಟೆಯಿಂದ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಂಗಳವಾರ ಹಳೆ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಕೆಂಪು ಕೋಟೆಯಿಂದ ಟೌನ್ ಹಾಲ್‌ ವರೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಇಂದು ಸಂಜೆ 7 ಗಂಟೆಗೆ ಕೆಂಪುಕೋಟೆಯಿಂದ ಆರಂಭವಾಗುವ ಲೋಕತಂತ್ರ ಬಚಾವೋ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಸಂಸದರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಬೀದಿಗಿಳಿಯುವುದಾಗಿ ಮತ್ತು ಈ ವಿಷಯದ ಬಗ್ಗೆ ಜನರ ಬಳಿ ಹೋಗುವುದಾಗಿ ಕಾಂಗ್ರೆಸ್ ಹೇಳಿದೆ.

kiniudupi@rediffmail.com

No Comments

Leave A Comment