ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕಾಸರಗೋಡು: ಲಾರಿ-ಬೈಕ್ ಢಿಕ್ಕಿ; ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು
ಕಾಸರಗೋಡು:ಮಾ 28. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ.
ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು.ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.
ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.