ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ವ್ಯಾಟಿಕನ್: ಉಸಿರಾಟದ ಸಮಸ್ಯೆ ಹಿನ್ನೆಲೆ ಪೋಪ್ ಫ್ರಾನ್ಸಿಸ್ ಆಸ್ಪತ್ರೆಗೆ ದಾಖಲು
ವ್ಯಾಟಿಕನ್:ಮಾ 30. ಪೋಪ್ ಫ್ರಾನ್ಸಿಸ್ ಅವರು ಇತ್ತೀಚಿನ ದಿನಗಳಲ್ಲಿ ಉಸಿರಾಟದ ತೊಂದರೆ ಅನುಭವಿಸಿದ ನಂತರ ಮಾರ್ಚ್ 29 ರಂದು ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಚಿಕಿತ್ಸೆಗಾಗಿ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಯುತ್ತಾರೆ ಎಂದು ವ್ಯಾಟಿಕನ್ ಮಾಹಿತಿ ನೀಡಿದೆ.
86 ವರ್ಷದ ಪೋಪ್‌ಗೆ COVID-19 ಇಲ್ಲ ಎಂದು ವಕ್ತಾರ ಮ್ಯಾಟಿಯೊ ಬ್ರೂನಿ ಬುಧವಾರ ತಡವಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪೋಪ್ ಫ್ರಾನ್ಸಿಸ್ ಅವರು ಜುಲೈ 2021 ರಲ್ಲಿ ಜೆಮೆಲ್ಲಿಯಲ್ಲಿ 10 ದಿನಗಳನ್ನು ಕಳೆದಿದ್ದರು. ಈ ನಡುವೆ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯದ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಮತ್ತು ಈ ವಾರಾಂತ್ಯದಲ್ಲಿ ಪಾಮ್ ಸಂಡೆಯೊಂದಿಗೆ ಪ್ರಾರಂಭವಾಗಲಿರುವ ಬಿಡುವಿಲ್ಲದ ಹೋಲಿ ವೀಕ್ ಈವೆಂಟ್‌ಗಳನ್ನು ಆಚರಿಸಲು ಅವರು ಸನ್ನದ್ಧವಾಗಬೇಕು.
ಈ ನಡುವೆ ಇತ್ತೀಚಿನ ದಿನಗಳಲ್ಲಿ ಪೋಪ್ ಫ್ರಾನ್ಸಿಸ್ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಮತ್ತು ಪರೀಕ್ಷೆಗಾಗಿ ಜೆಮೆಲ್ಲಿ ಆಸ್ಪತ್ರೆಗೆ ಹೋಗಿದ್ದರು ಎಂದು ಬ್ರೂನಿ ಹೇಳಿದರು. “ಪರೀಕ್ಷೆ ಸಂದರ್ಭದಲ್ಲಿ ಉಸಿರಾಟದ ಸೋಂಕು ಇರುವುದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬ್ರೂನಿಯ ಮಾಹಿತಿ ನೀಡಿದ್ದಾರೆ.