ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಸೊಳ್ಳೆ ಕಾಯಿಲ್‌ನಿಂದ ವಿಷಪೂರಿತ ಹೊಗೆ – ಉಸಿರುಗಟ್ಟಿ ಒಂದೇ ಕುಟುಂಬದ 6 ಮಂದಿ ಮೃತ್ಯು
ನವದೆಹಲಿ:ಮಾ 31. ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಸೊಳ್ಳೆ ಕಾಯಿಲ್‌ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದ್ದು, ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಇನ್ನು ಘಟನೆ ನಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದಿದ್ದು, ಇದರಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.