Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ: ಆದೇಶ ವಾಪಸ್ ಪಡೆದ ಹೆದ್ದಾರಿ ಪ್ರಾಧಿಕಾರ

ಮೈಸೂರು: ಮೈಸೂರು – ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸೋಷಿಯಲ್ ಮೀಡಿಯಾ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಇಂದು ಏಪ್ರಿಲ್ 1ರಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ದರವನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿತ್ತು. ಆದರೆ ಸಾರ್ವಜನಿಕರಿಂದ ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ತನ್ನ ಆದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಪಸ್ ಪಡೆದಿದೆ.

ಈ ಬಗ್ಗೆ ನಿನ್ನೆ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ, ಮಾರ್ಚ್ 14ನೇ ತಾರೀಖು ಟೋಲ್ ದರ ಹೆಚ್ಚಳ ಮಾಡಿದಾಗ ಬೆಂಗಳೂರಿನಿಂದ ನಿಡಘಟ್ಟ 135 ರೂಪಾಯಿ ಟೋಲ್ ದರ ನಿಗದಿಪಡಿಸಿದ್ದು. ಅದನ್ನು ಇಂದಿನಿಂದ ಅನ್ವಯವಾಗುವ ರೀತಿಯಲ್ಲಿ 165 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಇಡೀ ದೇಶಾದ್ಯಂತ ಇರುವ ಎಲ್ಲ ಟೋಲ್ ರಸ್ತೆಗಳಲ್ಲಿ ಶೇಕಡಾ 7ರಿಂದ ಒಂದಷ್ಟು ನಿಖರ ಬೆಲೆಯವರೆಗೆ ಹೆಚ್ಚಳ ಮಾಡಲಾಗಿದೆ. ಇದು ಕೇವಲ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಗೆ ಮಾತ್ರ ಅನ್ವಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಆದರೆ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ಇನ್ನೂ ಕೆಲವು ಕಾಮಗಾರಿಗಳು ನಡೆಯುತ್ತಿರುವುದರಿಂದ ಈ ಎಕ್ಸ್ ಪ್ರೆಸ್ ವೇಗೆ ಟೋಲ್ ದರ ಹೆಚ್ಚಳವಾಗುವುದು ಬೇಡ, ತಾತ್ಕಾಲಿಕವಾಗಿ ತಡೆಹಿಡಿಯಿರಿ ಎಂದು ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೆ ಎಂದಿದ್ದರು.

No Comments

Leave A Comment