Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಅರಕಲಗೂಡು ಜೆಡಿಎಸ್ ಮಾಜಿ ಶಾಸಕ ಎಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ

ನವದೆಹಲಿ: ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಎಟಿ ರಾಮಸ್ವಾಮಿ ಅವರು ಕೇಸರಿ ಪಕ್ಷ ಸೇರ್ಪಡೆಯಾದರು. ಅನುರಾಗ್ ಠಾಕೂರ್ ಅವರು ರಾಮಸ್ವಾಮಿ ಅವರಿಗೆ ಪಕ್ಷದ ಸದಸ್ಯತ್ವ ರಸೀದಿ ನೀಡಿ, ಶಾಲು ಹೋದಿಸಿ ಪಕ್ಷಕ್ಕೆ ಬರ ಮಾಡಿಕೊಂಡರು.

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಎ.ಟಿ ರಾಮಸ್ವಾಮಿ ಅವರು, ಅತ್ಯಂತ ಸಂತೋಷದಿಂದ ಪಕ್ಷವನ್ನು ಸೇರಿದ್ದೇನೆ. ಇಂದು ಸಂಜೆ ಅಥವಾ ನಾಳೆ ಮೋದಿ, ಅಮಿತ್ ಶಾ, ನಡ್ಡಾ ಅವರನ್ನು ಭೇಟಿಯಾಗುತ್ತಿದ್ದೇನೆ. ಇಡೀ ವಿಶ್ವದಲ್ಲೇ ಭಾರತ ಪಗ್ರತಿಯಲ್ಲಿ ದಾಪುಗಾಲು ಹಾಕುತ್ತಿದೆ. ಬಿಜೆಪಿ ನಾಯಕರು ಮೌಲ್ಯಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದರು.

No Comments

Leave A Comment