ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಏಪ್ರಿಲ್ 4ರ ಸಭೆಯ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಮೈಸೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 4 ರಂದು ಪಕ್ಷದ ನಿರ್ಣಾಯಕ ಸಭೆಯ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ವರುಣಾ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ, ಏಪ್ರಿಲ್ 4 ರಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ಹೇಳಿದರು.

ಕೇಂದ್ರ ಚುನಾವಣಾ ಸಮಿತಿ ಸಭೆ ಇದ್ದು, ಸಭೆಯ ನಂತರ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಮೊದಲ ಪಟ್ಟಿಯಲ್ಲಿ ಮೈಸೂರು ಜಿಲ್ಲೆಯ ವರುಣಾದಿಂದ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಿದ್ದು, ಹೈಕಮಾಂಡ್ ಒಪ್ಪಿಗೆ ಮೇರೆಗೆ ಕೋಲಾರದಿಂದಲೂ ಸ್ಪರ್ಧಿಸುವ ಇಂಗಿತವನ್ನು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, ಕೆಪಿಸಿಸಿ ಘಟಕವು ಎರಡನೇ ಪಟ್ಟಿಯಲ್ಲಿ 52 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹೆಸರನ್ನು ಅಂತಿಮಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕೇಂದ್ರ ಚುನಾವಣಾ ಸಮಿತಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಅಭ್ಯರ್ಥಿಯು ವರುಣಾದಲ್ಲಿ ಗೆಲ್ಲುವ ಅಥವಾ ಸೋಲುವ ನಿರ್ಧಾರವು ಮತದಾರರ ಕೈಯಲ್ಲಿದೆ. ವರುಣಾದಲ್ಲಿ ಎದುರಾಳಿ ಅಭ್ಯರ್ಥಿ ಯಾರೇ ಆಗಿರಲಿ, ನಾನು ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗಲ್ಲ. ಬದಲಿಗೆ ನಾಮಪತ್ರ ಸಲ್ಲಿಸಲು ಮಾತ್ರ ತೆರಳುತ್ತೇನೆ ಎಂದು ಹೇಳಿದರು.

ತಮ್ಮ ಪುತ್ರ ಹಾಗೂ ವರುಣಾ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರದ ಪ್ರಚಾರ ಕಾರ್ಯವನ್ನು ನೋಡಿಕೊಳ್ಳಲಿದ್ದು, ರಾಜ್ಯ ಪ್ರವಾಸ ಕೈಗೊಂಡು ಪಕ್ಷದ ಪರ ಪ್ರಚಾರ ನಡೆಸಿದ್ದೇನೆ ಎಂದರು.

ರಾಜ್ಯ ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರ ಕಿರಿಯ ಪುತ್ರ ಬಿವೈ ವಿಜಯೇಂದ್ರ ಅವರನ್ನು ವರುಣಾದಿಂದ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಇದ್ದವು. ಬಿಎಸ್‌ವೈ ಶುಕ್ರವಾರ ತಮ್ಮ ಮಗ ವರುಣಾದಿಂದ ಸ್ಪರ್ಧಿಸುವುದಿಲ್ಲ ಮತ್ತು ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.

No Comments

Leave A Comment