ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಜೆಡಿಎಸ್‌ನ ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ
ಶಿರಸಿ:ಏ 02. ಜೆಡಿಎಸ್‌ನ ಶಿವಲಿಂಗೇಗೌಡ ಅವರು ಅರಸೀಕೆರೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ವೇಳೆ ಪ್ರಮುಖರಾದ ಎಪಿಎಂಸಿ ರಾಮಚಂದ್ರ, ಜಿ.ಪಂ ಮಾಜಿ ಅಧ್ಯಕ್ಷ ಹುಚ್ಚೇಗವಡರು, ಸುರೇಶ ಚಗಚಗೇರಿ, ಈಶ್ವರಪ್ಪ ಚಗಚಗೇರಿ, ಮಾಜಿ ಉಪಾಧ್ಯಕ್ಷ ಬಿಳೆ ಚೌಡಯ್ಯರು, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗಂಡಸಿ ಅಯ್ಯಣ್ಣ, ಬಾಣಾವರ ರವಿ ಶಂಕರ, ಜಿ.ಕೆ. ಸತೀಶ, ಲೋಕೇಶ, ಬಿ.ಎಂ.ಧರ್ಮಣ್ಣ, ಪ್ರಜ್ಚಲ್, ಹೆಗ್ಗಡ ಮಂಜಣ್ಣ, ನಾಗರಹಳ್ಳಿ ದೇವರಾಜು, ಜಿ.ಎಂ.ರಂಗನಾಥ ಉಪಸ್ಥಿತರಿದ್ದರು.