ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ನಾಲ್ವರು ದುಷ್ಕರ್ಮಿಗಳಿಂದ ಯುವತಿಯ ಸಾಮೂಹಿಕ ಅತ್ಯಾಚಾರ : ಆರೋಪಿಗಳ ಬಂಧನ
ಬೆಂಗಳೂರು: ನಗರದ ಪಾರ್ಕ್ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್‌ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನು ಬೆದರಿಸಿ, ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಈ ಕುರಿತು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.
ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ಪೈಕಿ ಇಬ್ಬರು ಆಫಿಸ್ ಬಾಯ್, ಒಬ್ಬ ಕಾಲ್ ಸೆಂಟರ್ ಉದ್ಯೋಗಿ, ಮತ್ತೊಬ್ಬ ಇಲೆಸ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದಾನೆ.
ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾರ್ಚ್ 26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು.
ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಡಿಪಿಸಿ (ಆಗ್ನೇಯ) ಸಿ.ಕೆ.ಬಾಬಾ ಅವರು, ”ಪ್ರಕರಣ ದಾಖಲಾದ ಎಂಟು ಗಂಟೆಗಳ ನಂತರ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು. ನಾವು ವೈದ್ಯಕೀಯ ವರದಿಗಳಿಗಾಗಿ ಕಾಯುತ್ತಿದ್ದೇವೆ ಮತ್ತು ತನಿಖೆ ಇನ್ನೂ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.
ಸಂತ್ರಸ್ತ ಯುವತಿಯು ಕೂಡ ಅದೇ ಪ್ರದೇಶದ ನಿವಾಸಿಯಾಗಿದ್ದು, ಆರೋಪಿಗಳು ಆಕೆಗೆ ಪರಿಚಯಸ್ಥರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಈ ಘಟನೆಯಲ್ಲಿ ಆಕೆಯ ಪುರುಷ ಸ್ನೇಹಿತನ ಪಾತ್ರವಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ.ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.