Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಏ. 17 ರವರೆಗೆ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ಏಪ್ರಿಲ್ 17 ರವರೆಗೆ ವಿಸ್ತರಿಸಿದೆ.

ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಎಎಪಿ ನಾಯಕನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖೆಯು “ನಿರ್ಣಾಯಕ ಹಂತದಲ್ಲಿದೆ” ಎಂದು ಹೇಳಿದೆ. ಕೋರ್ಟ್ ಸಿಬಿಐ ಮನವಿಯನ್ನು ಪುರಸ್ಕರಿ ಏಪ್ರಿಲ್ 17ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.

No Comments

Leave A Comment