Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಕೂಡ್ಲಿಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ.

ಕೂಡ್ಲಿಗೆ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಮ್ಮಅಪಾರ ಬೆಂಬಲಿಗರೊಂದಿಗೆ ಗೋಪಾಲಕೃಷ್ಣ ಕೈ ಹಿಡಿದರು.

No Comments

Leave A Comment