Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಕೋವಿಡ್-19: ಒಂದೇ ದಿನ 3,038 ಹೊಸ ಸೋಂಕಿತರ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 21,179ಕ್ಕೇರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,038 ಹೊಸ ಸೋಂಕಿತರ ಪತ್ತೆಯಾಗಿದೆ.

ಈ ಬಗ್ಗೆ ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ನವೀಕಿರಸಲಾದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 3,038 ಹೊಸ ಕೊರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 21,179 ಕ್ಕೆ ಏರಿದೆ. ಅಂತೆಯೇ ಇದೇ ಅವಧಿಯಲ್ಲಿ ದೇಶದಲ್ಲಿ ಒಂಬತ್ತು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸಾವಿನ ಸಂಖ್ಯೆ 5,30,901 ಕ್ಕೆ ಏರಿದೆ.

ದೆಹಲಿ ಮತ್ತು ಪಂಜಾಬ್‌ನಿಂದ ತಲಾ ಎರಡು ಸಾವುಗಳು ವರದಿಯಾಗಿದ್ದರೆ, 24 ಗಂಟೆಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ ಮತ್ತು ಉತ್ತರಾಖಂಡದಿಂದ ತಲಾ ಒಂದು ಸಾವುಗಳು ವರದಿಯಾಗಿವೆ ಮತ್ತು ಕೇರಳದಲ್ಲಿ ಎರಡು ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ಅಂತೆಯೇ ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ (4,47,29,284) ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ 0.05 ಪ್ರತಿಶತವನ್ನು ಒಳಗೊಂಡಿವೆ ಮತ್ತು ರಾಷ್ಟ್ರೀಯ COVID-19 ಚೇತರಿಕೆ ದರವು 98.76 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅಂತೆಯೇ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,77,204 ಕ್ಕೆ ಏರಿದೆ, ಆದರೆ ಕೋವಿಡ್ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment