ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಸಿಕ್ಕಿಂನಲ್ಲಿ ಭಾರೀ ಹಿಮಪಾತ – 6 ಪ್ರವಾಸಿಗರು ಮೃತ್ಯು, 11 ಮಂದಿಗೆ ಗಾಯ
ನವದೆಹಲಿ:ಏ 04. ಸಿಕ್ಕಿಂನ ನಾಥು ಲಾ ಪರ್ವತ ಪಾಸ್‌ನಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಹಲವಾರು ಪ್ರವಾಸಿಗರು ಸಿಲುಕಿಸಿ ಆರು ಮಂದಿ ಸಾವನ್ನಪ್ಪಿ, ಎಂದು 11 ಮಂದಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.
ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿಮಪಾತ ಸಂಭವಿಸಿದಾಗ 150ಕ್ಕೂ ಹೆಚ್ಚು ವಿಹಾರಿಗರು ಈ ಪ್ರದೇಶದಲ್ಲಿದ್ದರು ಎಂದು ವರದಿಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ತಂಡವನ್ನ ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯ ಪ್ರಾರಂಭಿಸಿದೆ ಎಂದರು.
ಇನ್ನು ಇವರ ಜೊತೆಗೆ ಸಿಕ್ಕಿಂ ಪೊಲೀಸರು, ಸಿಕ್ಕಿಂನ ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮತ್ತು ವಾಹನ ಚಾಲಕರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೃತರಲ್ಲಿ 4 ಪುರುಷರು, 1 ಮಹಿಳೆ ಮತ್ತು ಮಗು ಸೇರಿದ್ದು, ಹಿಮಕುಸಿತದ ನಂತರ ಗಾಯಾಳುಗಳನ್ನು ಹತ್ತಿರದ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅಲ್ಲಿ 6 ಜನರು ಸಾವನ್ನಪ್ಪಿದ್ದಾರೆ.