Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಮುಸ್ಲಿಂ ವ್ಯಕ್ತಿ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ಬೆಂಗಳೂರು: ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ.

ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ ಬಂಧನವಾಗಿದೆ.

ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಸಾತನೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣ ದಾಖಲಾಗುತ್ತಲೇ ಆರೋಪಿಗಳು ಕರ್ನಾಟಕದಿಂದ ಪರಾರಿ ಆಗಿದ್ದರು. ಒಟ್ಟು ನಾಲ್ಕು ತಂಡಗಳಾಗಿ ಜನ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಸದ್ಯ ಆರೋಪಿಗಳನ್ನು ಅಲ್ಲಿಂದ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾರ್ಚ್ 31ರಂದು ಕನಕಪುರ ತಾಲ್ಲೂಕಿನ ಸಾತನೂರು ಪೊಲೀಸ್ ಠಾಣೆ ಬಳಿ ಆರೋಪಿಗಳು ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನವನ್ನು ತಡೆದಿದ್ದರು. ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

No Comments

Leave A Comment