ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರು ಮಲ್ಲಿಕಾರ್ಜುನ ಖರ್ಗೆ’: ಕಾಂಗ್ರೆಸ್ ಅಧ್ಯಕ್ಷರ ಭೇಟಿ ಮಾಡಿದ ನವಜೋತ್ ಸಿಂಗ್ ಸಿದ್ದು
ನವದೆಹಲಿ: ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರೇ ಮಲ್ಲಿಕಾರ್ಜುನ ಖರ್ಗೆ ಎಂದು ಪಂಜಾಬ್ ರಾಜಕೀಯ ಮುಖಂಡ ನವಜೋತ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjot Singh Sidhu ) ಶುಕ್ರವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರನ್ನು ಭೇಟಿಯಾದರು.
“9 ಬಾರಿ ಶಾಸಕ, ಮೂರು ಬಾರಿ ಸಂಸದ, ಹಿಂದುಳಿದವರ ಪರವಾಗಿ ಚಾಂಪಿಯನ್, ಸತ್ಯದ ಧ್ವನಿ… ವಿಶ್ವಾಸಾರ್ಹತೆ ಹೆಸರೇ ಮಲ್ಲಿಕಾರ್ಜುನ ಖರ್ಗೆ”. ಕಾಂಗ್ರೆಸ್ ನ ಗೌರವಾನ್ವಿತ ಅಧ್ಯಕ್ಷರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಖರ್ಗೆ ಅವರು ಪಕ್ಷಕ್ಕೆ ಸಕಾರಾತ್ಮಕ ಕಂಪನ ಹಾಗೂ ಅದೃಷ್ಟವನ್ನು ತರುತ್ತಾರೆ” ಎಂದು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ನವಜೋತ್ ಸಿಂಗ್ ಸಿಧು ಬರೆದಿದ್ದಾರೆ.
ತನ್ನನ್ನು ಜೈಲಿಗೆ ಹಾಕಬಹುದು ಅಥವಾ ಬೆದರಿಸಬಹುದು. ಆದರೆ ಪಂಜಾಬ್ ಅಥವಾ ಅವರ ನಾಯಕರ ಮೇಲಿನ ಬದ್ಧತೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಗುರುವಾರ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿದ ನಂತರ ಸಿಧು ಹೇಳಿದ್ದಾರೆ.
1988 ರ ರೋಡ್ ರೇಜ್ ಪ್ರಕರಣದಲ್ಲಿ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಸಿಧು ಅವರು ಎಪ್ರಿಲ್ 1 ರಂದು ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಿದ್ದರು.