ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಭಾರತದಲ್ಲಿ ಕೊರೋನಾ ಉಲ್ಭಣ: ದೇಶದಲ್ಲಿಂದು 6,155 ಸೋಂಕು ಪತ್ತೆ, 31 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,155 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,51,259ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,954ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,194ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,89,111ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,09,378 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,26,13,516 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,22,663 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.