ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏರಲಿದೆ, ಕಾಂಗ್ರೆಸ್ ಅಮುಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಸಿಎಂ ಬೊಮ್ಮಾಯಿ

ನವದೆಹಲಿ: ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಇದಕ್ಕೆ ಸಂಬಂಧಪಟ್ಟಂತೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಎಂಎಫ್​​ನ ನಂದಿನಿ (Nandini) ರಾಷ್ಟ್ರ ಮಟ್ಟದ ಬ್ರ್ಯಾಂಡ್. ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಇಂದು ಹೇಳಿದ್ದಾರೆ.

ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ. ಅಮುಲ್ ಬ್ರ್ಯಾಂಡ್​ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ​ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಅಮುಲ್ ಅಂದ್ರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸ್ಸಾ?: ಈ ಮಧ್ಯೆ, ನಂದಿನಿ ಬ್ರ್ಯಾಂಡ್ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್, ಹಾಲಿಗೆ ಪ್ರೋತ್ಸಾಹ ಧನ‌ ಕೊಟ್ಟಿದ್ದರೆ‌ ಅದು‌ ಬಿಜೆಪಿ ಸರ್ಕಾರ. ಪ್ರತಿ‌ ಲೀಟರ್ ಗೆ 5 ರೂಪಾಯಿ ಪ್ರೋತ್ಸಾಹ ಧನ ಬಿಜೆಪಿ ಸರ್ಕಾರ ಕೊಟ್ಟಿದೆ. ಕೆಎಂಎಫ್ ಆದಾಯದಲ್ಲಿ ಹಾಲು ಉತ್ಪಾದಕರಿಗೆ‌ ಕೊಡುವ ವ್ಯವಸ್ಥೆ ಮಾಡಲಾಗಿದೆ. ನಂದಿನಿ‌ ಹಾಲನ್ನು ಕೇವಲ ರಾಜ್ಯಕ್ಕೆ ಸೀಮಿತ ಮಾಡಬೇಡಿ. ಈಗಾಗಲೇ ಸೇನೆಗೆ, ತಿರುಪತಿ ತಿರುಮಲ,‌ ಮಹಾರಾಷ್ಟ್ರಕ್ಕೆ ನಮ್ಮ ಹಾಲು ಪೂರೈಕೆಯಾಗುತ್ತಿದೆ.

ಇತರೆ ಬ್ರ್ಯಾಂಡ್​ನ ಹಾಲುಗಳನ್ನು ರಾಜ್ಯದಲ್ಲಿ ಹಿಂದಿನಿಂದಲೂ ಮಾರಾಟ ಮಾಡುತ್ತಿದ್ದಾರೆ. ಅಮುಲ್ ಅಂದ್ರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸ್ಸಾ ಎಂದು ಸುಧಾಕರ್​ ಪ್ರಶ್ನಿಸಿದ್ದಾರೆ. ಈ ರೀತಿಯ ರಾಜಕೀಯ ಮಾಡುವುದನ್ನು ಬಿಡಬೇಕು, ಕಾಮಾಲೆ ಕಣ್ಣಿನಿಂದ ನೋಡುವುದನ್ನು ಬಿಡಿ ಎಂದು ಕಾಂಗ್ರೆಸ್​ ಅನ್ನು ಉದ್ದೇಶಿಸಿ ಸುಧಾಕರ್ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ: ಬಿಜೆಪಿ ಸಂಸದೀಯ ಮಂಡಳಿ ಸಮಿತಿ ಸಭೆ ಇಂದು ದೆಹಲಿಯಲ್ಲಿ ನಡೆಯಲಿದ್ದು ಈಗಾಗಲೇ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ದೆಹಲಿಯಲ್ಲಿದ್ದಾರೆ. ಇಂದು ಸಂಜೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

No Comments

Leave A Comment