ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಭಾರತದಲ್ಲಿ ಏರಿಕೆಯ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 7,830 ಸೋಂಕು ಪತ್ತೆ, 40 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ!

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,76,002ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,04,771ಕ್ಕೆ ತಲುಪಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ  220,66,24,326 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

No Comments

Leave A Comment