ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ನಂಗೆ ಟಿಕೆಟ್ ಇಲ್ಲ ಅನ್ನೋದನ್ನ ಟಿವಿಯಲ್ಲಿ ನೋಡ್ಬೇಕಾ? ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ, ಗಳಗಳನೆ ಅತ್ತ ರಘುಪತಿ ಭಟ್!
ಉಡುಪಿ: ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ. ನನಗೆ ಟಿಕೆಟ್ ಇಲ್ಲ ಎನ್ನುವುದನ್ನು ಟಿವಿಯಲ್ಲಿ ನೋಡಿ ತಿಳಿದುಕೊಳ್ಳಬೇಕಾ ಎಂದು ಉಡುಪಿಯ ಶಾಸಕ ಕೆ ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಪಕ್ಷ ಟಿಕೆಟ್ ನೀಡದೇ ಇರುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಮತ್ತು ಶಾಕ್ ಕೂಡ ಆಗಿದೆ. ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಡುವ ಪ್ರಶ್ನೆಯೇ ಇಲ್ಲ. ಯಾಕೆ ಹೀಗಾಯಿತು ಎಂಬುದು ತುಂಬ ಬೇಸರ ತಂದಿದೆ. ನಾನು ಬೆಳೆಸಿದ ಹುಡುಗ ಅಭ್ಯರ್ಥಿಯಾಗಿದ್ದು, ಅವರಿಗೆ ಶುಭಾಶಯ ಕೋರುತ್ತೇನೆ. ಅಭ್ಯರ್ಥಿ ಬಗ್ಗೆ ಯಾವುದೇ ಆಕ್ಷೇಪವಿಲ್ಲ.
ಉಡುಪಿಯಲ್ಲಿ ಪಾರ್ಟಿ ಕಟ್ಟಿದ್ದೇನೆ ಮತ್ತು ಬಿಜೆಪಿಯಿಂದ ಇಲ್ಲಿ ಯಾರು ನಿಂತರೂ ಗೆಲ್ಲಲಿದ್ದಾರೆ ಅಂತಹ ಸ್ಥಿತಿ ನಿರ್ಮಾಣ ಮಾಡಿದ್ದೇನೆ. ಪಕ್ಷಕ್ಕೆ ಈಗ ನನ್ನ ಅವಶ್ಯಕತೆ ಇಲ್ಲ ಎಂಬುದು ತೋರಿಸುತ್ತಿದ್ದಾರೆ. ಅಮಿತ್ ಶಾ ಬೇಡ, ರಾಜ್ಯ ನಾಯಕರು ಅಥವಾ ಜಿಲ್ಲಾಧ್ಯಕ್ಷರು ಕರೆ ಮಾಡದೇ ಇರುವುದು ಬೇಸರ ತಂದಿದೆ ಎಂದರು.