ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉತ್ತರಪ್ರದೇಶ: ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್’ಕೌಂಟರ್ ನಲ್ಲಿ ಹತ್ಯೆ

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ  ಪುತ್ರ ಅಸದ್ ಹಾಗೂ ಅವರ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹತ್ಯೆಯಾದ ಅಸದ್ ನಿಂದ ಕೆಲವು ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಟಿಎಫ್ ಮೂಲಗಳು ಮಾಹಿತಿ ನೀಡಿವೆ. ಅಸದ್ ಅಹ್ಮದ್ ಅವರ ತಲೆಗೆ ಈ ಹಿಂದೆ ಪೊಲೀಸರು 5 ಲಕ್ಷ ರೂ ಇನಾಮು ಘೋಷಿಸಿದ್ದರು.

ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಅವರ ಸಹೋದರಿ ಆಯೇಷಾ ನೂರಿ ಅವರ ಮಗಳೊಂದಿಗೆ ಹತ್ಯೆಯಾದ ಅಸಾದ್ ಮದುವೆ ನಿಶ್ಚಯವಾಗಿತ್ತು. ಕಳೆದ ವರ್ಷ ಇವರಿಬ್ಬರ ನಿಶ್ಚಿತಾರ್ಥವಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಅತೀಕ್ ಅಹ್ಮದ್, ಗುಜರಾತ್‌ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದ.

ಸರ್ಕಾರ ನನ್ನನ್ನು ನಾಶ ಮಾಡಿದೆ. ತನ್ನ ಕುಟುಂಬ ನಾಶ ಮಾಡಿದೆ. ಸಬರಮತಿ ಜೈಲಿನಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದ.

2006ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಮಾರ್ಚ್ 28ರಂದು ಅಲ್ಲಿನ ನ್ಯಾಯಾಲಯ ಅಹ್ಮದ್ ಮತ್ತು ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

kiniudupi@rediffmail.com

No Comments

Leave A Comment