ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಅರೆಬರೆ ಬಟ್ಟೆ ಧರಿಸಿ ‘ಶೂರ್ಪನಖಿ’ಯಂತೆ ಕಾಣುವ ಯುವತಿಯರು, ಬಿಜೆಪಿ ನಾಯಕನ ವಿರುದ್ಧ ಕೆರಳಿದ ಸಂಸದೆ ಮೋಯಿತ್ರಾ!

ಕೋಲ್ಕತ್ತಾ: ಅರೆಬರೆ ಬಟ್ಟೆಗಳನ್ನು ಧರಿಸುವ ಯುವತಿಯರು ರಾಮಾಯಣದಲ್ಲಿ ಬರುವ ರಾಕ್ಷಸಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತ ವಿಡಿಯೋವೊಂದನ್ನು ಟ್ವೀಟ್ ನಲ್ಲಿ ಹಂಚಿಕೊಂಡಿರುವ ಮೊಯಿತ್ರಾ, ಶುಕ್ರವಾರ ಬೆಳಗ್ಗೆ ಬಿಜೆಪಿ ನಾಯಕರು ಮತ್ತು ಭಕ್ತರಿಗೆ ಒಂದು ಸಂದೇಶವಿದೆ. ನಾವು ಬೆಂಗಾಲಿ ಮಹಿಳೆಯರು ನಮಗೆ ಏನು ಬೇಕೊ ಅದನ್ನು ಹಾಕಿಕೊಳ್ಳುತ್ತೇವೆ, ನಮಗೆ ಏನು ಬೇಕೊ ಅದನ್ನು ತಿನ್ನುತ್ತೇವೆ. ನಮಗೆ ಯಾರನ್ನು ಪೂಜೆಸಬೇಕೆನಿಸುತ್ತದೆೋ ಅವರನ್ನು ಪೂಜೆಸುತ್ತೇವೆ. ನಮ್ಮ ಬಟ್ಟೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ ಎಂದು ಕಿಡಿಕಾರಿದ್ದಾರೆ.

ಮಧ್ಯಪ್ರದೇಶದ ಇಂದೋರ ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೈಲಾಶ್ ವಿಜಯ ವರ್ಗೀಯ, ರಾತ್ರಿ ವೇಳೆ ಹೊರಗೆ ಹೋಗುವಾಗ ಅನೇಕ ಯುವತಿಯರು ಕುಡಿದು ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ಮಹಿಳೆಯರು ಮತ್ತು ಯುವತಿಯರನ್ನು ನಾವು ದೇವತೆಗಳೆಂದು ಕರೆಯುತ್ತೇವೆ. ಅರೆಬರೆ ಬಟ್ಟೆ ಧರಿಸಿ ಓಡಾಡುವ ಯುವತಿಯರು ರಾಕ್ಷಸಿ ಶೂರ್ಪನಖಿ ಹಾಗೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಭಾರೀ ಟೀಕೆ ವ್ಯಕ್ತವಾಗಿತ್ತು.

No Comments

Leave A Comment