ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ರಾಜಿನಾಮೆ

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಸವದಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಇದಾದ ಬಳಿಕ ಇದೀಗ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿವಿಧ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಲಕ್ಷ್ಮಣ್ ಸವದಿ ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಸದ್ಯ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಒಂದು ವೇಳೆ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಬೆಳಗಾವಿಯಲ್ಲಿ ನಿಂತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಕೇಳಿದ್ದಾರೆ. ಇದಕ್ಕೆ ಕೈ ನಾಯಕರು ಆಗಲಿ ಎಂದಿದ್ದಾರೆ ಎಂದು ಸವದಿ ಹೇಳಿದರು.

ಲಕ್ಷ್ಮಣ್ ಸವದಿ ಅವರು ಇಂದು ಸಂಜೆ 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ.

No Comments

Leave A Comment