Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲು!

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ.

ಇಂದು ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ.

ಮೃತರು ಘಟಪ್ರಭಾದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment