ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದ ರಾಜಸ್ಥಾನದ ನಂದಿನಿ ಗುಪ್ತಾ
ಮುಂಬೈ: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಿರೀಟ ರಾಜಸ್ಥಾನದ ನಂದಿನಿ ಗುಪ್ತಾ ಮುಡಿಗೇರಿದೆ.
ಶನಿವಾರ ಮಣಿಪುರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 19 ವರ್ಷದ ನಂದಿನಿ ಗುಪ್ತಾ, ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಸ್ಪರ್ಧೆಯಲ್ಲಿ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಆಪ್, ಹಾಗೂ ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ 2 ನೇ ರನ್ನರ್ ಆಗಿ ಹೊರಹೊಮ್ಮಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ‘ಗ್ರ್ಯಾಂಡ್ ಮಿಸ್ ವರ್ಲ್ಡ್’ ಸ್ಪರ್ಧೆಯ 71ನೇ ಆವೃತ್ತಿಯಲ್ಲಿ ಭಾರತವನ್ನು ನಂದಿನಿ ಪ್ರತಿನಿಧಿಸಲಿದ್ದಾರೆ. ನಂದಿನಿ ಗುಪ್ತಾ ಅವರು ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದುಕೊಂಡಿದ್ದಾರೆ.
ಮಿಸ್ ಇಂಡಿಯಾ ಸಂಸ್ಥೆಯ ಪ್ರಕಾರ, ರತನ್ ಟಾಟಾ ಅವರು ನಂದಿನಿಯ ಜೀವನದಲ್ಲಿ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ. ಅವರ ಮಾನವೀಯತೆ ಹಾಗೂ ದಾನ ಮಾಡುವ ಗುಣ ಹೆಚ್ಚು ಇಷ್ಟಪಡುತ್ತಾರೆ. ಪ್ರಿಯಾಂಕ ಚೋಪ್ರಾ ಅವರ ಸಾಧನೆಗಳಿಂದ ನಂದಿನಿ ಹೆಚ್ಚು ಸ್ಫೂರ್ತಿ ಪಡೆದುಕೊಂಡಿದ್ದಾರೆಂದು ಸಂದರ್ಶನ ಒಂದರಲ್ಲಿ ತಿಳಿಸಿದೆ.
‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯಲ್ಲಿ ನಂದಿನಿ ಗುಪ್ತಾ ಕಿರೀಟ ಗೆದ್ದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಮತ್ತು ಅನನ್ಯ ಪಾಂಡೆ ಭಾಗವಹಿಸಿದ್ದರು.