Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಆಂಧ್ರ ಪ್ರದೇಶ ಸಿಎಂಗೆ CBI ಶಾಕ್; ಕೊಲೆ ಪ್ರಕರಣದಲ್ಲಿ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಬಂಧನ

ಕಡಪ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ.

ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ.

ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣದಲ್ಲಿ ವೈಎಸ್​ಆರ್​ಪಿ ಕಡಪ ಸಂಸದ ವೈ.ಎಸ್ ಅವಿನಾಶ್ ರೆಡ್ಡಿ ಅವರ ತಂದೆ ಭಾಸ್ಕರ್ ರೆಡ್ಡಿಯವರನ್ನು ಸಿಬಿಐ ಬಂಧಿಸಿದೆ. 2019ರ ಮಾರ್ಚ್‌ 15 ರಂದು ವಿವೇಕಾನಂದ ರೆಡ್ಡಿ ಆಂಧ್ರಪ್ರದೇಶದ ಪುಲಿವೆಂದುಲದಲ್ಲಿರುವ ತಮ್ಮ ನಿವಾಸದಲ್ಲೇ ಹತ್ಯೆಯಾಗಿದ್ದರು. ರಾಜ್ಯ ವಿಧಾನಸಭಾ ಚುನಾವಣೆಗೂ ಕೆಲ ದಿನಗಳ ಹಿಂದೆ ಈ ಘಟನೆ ನಡೆದಿತ್ತು.

ರಾಜ್ಯದ ಅಪರಾಧ ತನಿಖಾ ದಳದ ವಿಶೇಷ ತನಿಖಾ ತಂಡ ಈ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿತ್ತು. ನಂತರ 2020ರ ಜುಲೈನಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಭಾಸ್ಕರ್ ರೆಡ್ಡಿ ಅವರ ಬಂಧನ 48 ಗಂಟೆಗಳಲ್ಲಿ ಸಿಬಿಐ ಬಂಧಿಸಿದ ಎರಡನೇ ವ್ಯಕ್ತಿ ಇವರಾಗಿದ್ದಾರೆ. ಕಡಪ ಸಂಸದ ವೈಎಸ್ ಅವಿನಾಶ್ ರೆಡ್ಡಿ ಅವರ ಆಪ್ತ ಗಜ್ಜಲ ಉದಯ್ ಕುಮಾರ್ ರೆಡ್ಡಿ ಅವರನ್ನು ಸಹ ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದರು.

ಭಾನುವಾರ ಬೆಳಗ್ಗೆ ಎರಡು ವಾಹನಗಳಲ್ಲಿ ಪುಲಿವೆಂದುಲದಲ್ಲಿರುವ ಭಾಸ್ಕರ್ ರೆಡ್ಡಿ ಅವರ ನಿವಾಸಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಭಾಸ್ಕರ್ ರೆಡ್ಡಿಯನ್ನು ವಶಕ್ಕೆ ಪಡೆದು ಅವರ ಕುಟುಂಬ ಸದಸ್ಯರಿಗೆ ಅರೆಸ್ಟ್​ ವಾರೆಂಟ್​ ಅನ್ನು ನೀಡಿದ್ದಾರೆ.

ಭಾಸ್ಕರ್ ರೆಡ್ಡಿ ಬಂಧನದ ವಿಷಯ ತಿಳಿಯುತ್ತಿದ್ದಂತೆ ವೈಎಸ್​ಆರ್​ಪಿ ಕಾರ್ಯಕರ್ತರು ಹಾಗೂ ಸಂಸದರ ಅನುಯಾಯಿಗಳು ಅವರ ನಿವಾಸದೆದುರು ಜಮಾಯಿಸಿದ್ದರು. ಸಿಬಿಐ ಚಾರ್ಜ್‌ಶೀಟ್ ಪ್ರಕಾರ, ಕೊಲೆಯಾದ ವಿವೇಕಾನಂದ ರೆಡ್ಡಿ ಅವರು ಕಡಪಾ ಲೋಕಸಭೆಯಿಂದ ಹಾಲಿ ಸಂಸದನಾಗಿರುವ ಅವಿನಾಶ್ ರೆಡ್ಡಿ ಬದಲಿಗೆ ತನಗೆ ಅಥವಾ ವೈಎಸ್ ಶರ್ಮಿಳಾ ಅಥವಾ ವೈಎಸ್ ವಿಜಯಮ್ಮ ಅವರಿಗೆ ಟಿಕೆಟ್ ಬಯಸಿದ್ದರು. ವಿವೇಕಾನಂದರೆಡ್ಡಿ ಆಂಧ್ರಪ್ರದೇಶದ ದಿ. ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಹೋದರ ಹಾಗೂ ಹಾಲಿ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ ಅವರ ಚಿಕ್ಕಪ್ಪ.

No Comments

Leave A Comment