ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅದಾನಿ ಭ್ರಷ್ಟಾಚಾರದ ಪ್ರತೀಕ; ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ

ಕೋಲಾರ: ಅದಾನಿ ‘ಭ್ರಷ್ಟಾಚಾರ’ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ ಸಂಸದ ಸ್ಥಾನದಿಂದ ಅನರ್ಹಗೊಲಿಸಲಾಯಿತು.

ಮಾರ್ಚ್ 29 ರಂದು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಕರ್ನಾಟಕಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡಿರುವ ಅವರು, ಪ್ರಧಾನಿಯನ್ನು ಗುರಿಯಾಗಿಸಲು ಅದಾನಿ ವಿಷಯವನ್ನು ಒತ್ತಿ ಹೇಳಿದರು. ಇಲ್ಲಿ ನಡೆದ ‘ಜೈ ಭಾರತ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಅದಾನಿ ಭ್ರಷ್ಟಾಚಾರದ ಸಂಕೇತ ಎಂದರು.

ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷವು ಸರ್ಕಾರ ರಚಿಸಿದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ತನ್ನ ಪ್ರಮುಖ ಚುನಾವಣಾ ಭರವಸೆಗಳನ್ನು ಅಂಗೀಕರಿಸುತ್ತದೆ ಮತ್ತು ಅವುಗಳ ಅನುಷ್ಠಾನಕ್ಕೆ ದಾರಿ ಮಾಡಿಕೊಡಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಎದುರಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಾರ್ಚ್ 23ರಂದು ಗುಜರಾತ್‌ನ ಸೂರತ್‌ನ ನ್ಯಾಯಾಲಯವು 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ‘ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ’ ಎಂಬ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

2019ರ ಏಪ್ರಿಲ್‌ನಲ್ಲಿ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.

kiniudupi@rediffmail.com

No Comments

Leave A Comment