ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ದುಬೈಯ ವಸತಿ ಕಟ್ಟಡಕ್ಕೆ ಬೆಂಕಿ – 16 ಮಂದಿ ಮೃತ್ಯು, 9 ಜನರಿಗೆ ಗಾಯ

ದುಬೈ:ಏ 16. ದುಬೈನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 16 ಜನರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಗರಿಕ ರಕ್ಷಣಾ ಪಡೆಯ ಪ್ರಕಾರ ಕಟ್ಟಡದಲ್ಲಿ ಸುರಕ್ಷತೆ ಮತ್ತು ಭದ್ರತಾ ಕ್ರಮಗಳ ಅನುಸರಣೆಯ ಕೊರತೆಯಿಂದ ಬೆಂಕಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಏಳು ಎಮಿರೇಟ್‌ಗಳಲ್ಲಿ ಒಂದಾದ ದುಬೈ, ಸುಮಾರು 3.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ, ಅವರಲ್ಲಿ ಸುಮಾರು 90 ಪ್ರತಿಶತ ವಿದೇಶಿಯರು ಇದ್ದಾರೆ.

No Comments

Leave A Comment