Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ -ಉಡುಪಿಯಲ್ಲಿ ಪಕ್ಷೇತರ ಅಭ್ಯರ್ಥಿಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರ ಸಲ್ಲಿಕೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಪಾದಯಾತ್ರೆ ನಡೆಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ…
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಪತ್ನಿ ವಿಜಯಾ ಶೆಟ್ಟಿಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಅದಕ್ಕೂ ಮುಂಚೆ ಕಾಪು ಶ್ರೀ ಹಳೇ ಮಾರಿಗುಡಿ, ಹೊಸ ಶ್ರೀ ಮಾರಿಗುಡಿ, ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನ, ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇತ್ಯಾದಿ ದೇವಸ್ಥಾನಗಳಿಗೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು‌.

ತಮಿಳುನಾಡು ಬಿಜೆಪಿ ಅಧ್ಯಕ್ಷ ಹಾಗೂ ಕರ್ನಾಟಕ ಚುನಾವಣೆ ಸಹ ವೀಕ್ಷಕ ಕೆ. ಅಣ್ಣಾಮಲೈ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸುನೀಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಲಾಲಾಜಿ‌ ಆರ್. ಮೆಂಡನ್ ಮತ್ತು ರಘುಪತಿ ಭಟ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಉಸ್ತುವಾರಿ ಸುಲೋಚನಾ ಭಟ್, ಪ್ರಮುಖರಾದ ಶ್ಯಾಮಲಾ ಕುಂದರ್, ದಿನಕರ ಬಾಬು, ಕುತ್ಯಾರು ನವೀನ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಕೆ. ಶೆಟ್ಟಿ, ಸುರೇಂದ್ರ ಪಣಿಯೂರು, ಅಂಡಾರು ದೇವಿಪ್ರಸಾದ್ ಶೆಟ್ಟಿ, ಪ್ರವೀಣ್ ಶೆಟ್ಟಿ ಗುರ್ಮೆ ಮೊದಲಾದವರು ಪಾದಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಅದೇ ರೀತಿಯಲ್ಲಿ ಉಡುಪಿಯಿ೦ದ ಕಾ೦ಗ್ರೆಸ್ ಪಕ್ಷದಿ೦ದ ಟಿಕೇಟ್ ವ೦ಚಿತರಾದ ಕೆ,ಕೃಷ್ಣಮೂರ್ತಿ ಆಚಾರ್ಯರವರು ತಮ್ಮ ನಾಮಪತ್ರವನ್ನು ಸೋಮವಾರದ೦ದು ತಮ್ಮ ಪತ್ನಿ ನಗರಸಭಾ ಸದಸ್ಯರಾದ ಅಮೃತರವರೊ೦ದಿಗೆ ಚುನಾವಣಾಧಿಕಾರಿಯವರಿಗೆ ಸಲ್ಲಿಸಿದರು.

ಅದೇ ರೀತಿಯಲ್ಲಿ ಕಾ೦ಗ್ರೆಸ್ ಪಕ್ಷದಿ೦ದ ಪ್ರಸಾದ್ ರಾಜ್ ಕಾ೦ಚನ್ ತಮ್ಮ ನಾಮಪತ್ರವನ್ನು ಪಕ್ಷದ ಅಧ್ಯಕ್ಷರ ಹಾಗೂ ಕಾರ್ಯಕರ್ತರೊ೦ದಿಗೆ ಮೆರವಣಿಗೆಯಲ್ಲಿ ಸಾಗಿ ಬ೦ದು ಸಲ್ಲಿಸಿದರು.

No Comments

Leave A Comment