ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕಡಬ: ಕಾರು ಮತ್ತು ತೂಫನ್ ನಡುವೆ ಅಪಘಾತ – ಮಗು ಸೇರಿದಂತೆ ನಾಲ್ವರು ಮೃತ್ಯು

ಕಡಬ:ಏ 18. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು, ಮೃತಪಟ್ಟಿದ್ದಾರೆ.

ಇನ್ನು ಮೃತರು ಬೇಳೂರು ಕಡೆಯವರು ಎಂದು ತಿಳಿದು ಬಂದಿದ್ದು, ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

No Comments

Leave A Comment