Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಜೆಪಿ ನಡ್ಡಾ, ನಟ ಸುದೀಪ್ ಭಾಗಿ: ಬಿಜೆಪಿಗೆ 125ಕ್ಕೂ ಹೆಚ್ಚು ಸ್ಥಾನ ಎಂದ ಸಿಎಂ

ಹಾವೇರಿ: ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸತತ 15 ವರ್ಷಗಳಿಂದ ಆಶೀರ್ವಾದ ಮಾಡಿದ್ದೀರಿ. ಶಿಗ್ಗಾಂವಿ ಕ್ಷೇತ್ರದ ಜನರ ಪ್ರೀತಿಗೆ ನಾನು ಸೋತಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ನಾನು ಮುಖ್ಯಮಂತ್ರಿ ಆಗಿ ವಿದ್ಯಾರ್ಥಿಗಳು, ರೈತರಿಗಾಗಿ ಯೋಜನೆ ಜಾರಿ ಮಾಡಿದ್ದೇನೆ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೋಹ ಇತ್ತು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ನಾನು ತೀರುಕೊಂಡ ಮೇಲೆ ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು ಎಂದು ಹೇಳಿದರು.

ಬಳಿಕ ಮಾತನಾಡಿದ ನಟ ಕಿಚ್ಚ ಸುದೀಪ್ ಅವರು, ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.

ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಗೆದ್ದೇ ಗೆಲ್ಲುವೆ ಒಂದು ದಿನ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಎಂದು ಹೇಳಿದರು.

ನಿಮ್ಮ ಬೆಂಬಲ ಇದ್ದರೆ ಕೆಲಸ ಆಗುತ್ತದೆ. ನಾನು ಕೆಲಸ ಆಗುವವರ ಪರ ಇರುತ್ತೇನೆ. ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ವಿದೇಶದಲ್ಲಿ ಭಾರತದ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾರೆ ಎಂದು ಮೋದಿಯವರ ಕುರತು ಮೆಚ್ಚುಗೆ ವ್ಯಕ್ತಪಡಿಸಿದರು.

ನಾನು ಸುಖಾ ಸುಮ್ಮನೆ ಪ್ರಚಾರಕ್ಕೆ ಇಳಿಯಲ್ಲ. ಗೆದ್ದೆ ಗೆಲ್ಲುವೆ ಒಂದು ದಿನ. ಗೆಲ್ಲಲೇಬೇಕು ಒಳ್ಳೆಯತನ. ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಹೋಗುತ್ತೇನೆ. ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿ ಎಂದು ಮನವಿ ಮಾಡಿದರು.

ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ: ಜೆಪಿ ನಡ್ಡಾ
ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಕೇವಲ ಶಾಸಕ ಸ್ಥಾನಕ್ಕಾಗಿ ಅಲ್ಲ. ರಾಜ್ಯವನ್ನು ಹೊಸ ದಿಕ್ಕಿಗೆ ಒಯ್ಯುವ ಕಾರ್ಯ ಆಗಲಿದೆ. ನಿಮ್ಮಲ್ಲಿರುವ ಆತ್ಮ ವಿಶ್ವಾಸ, ಉತ್ಸಾಹ ನೋಡಿದರೇ ಬೊಮ್ಮಾಯಿ ಅವರಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ ಎಂದೆನಿಸುತ್ತಿದೆ ಎಂದು ಹೇಳುವ ಮೂಲಕ ಬೊಮ್ಮಾಯಿಯವರು ಮತ್ತೆ ಸಿಎಂ ಆಗುವ ಸುಳಿವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನೀಡಿದ್ದಾರೆ.

ಇದೇ ನೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಎಂದರೆ, ಅಂದ್ರೆ ಕಮಿಷನ್. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಎಂದರು.

ಕಾಂಗ್ರೆಸ್ ನಾಯಕರು ಎಟಿಎಂ ಇದ್ದಂತೆ. ವಂದೇ ಭಾರತ ರೈಲು ಇಲ್ಲಿ ಓಡಾಡುತ್ತಿದೆ. ರಾಜ್ಯದಲ್ಲಿ ಅನೇಕ ಹೊಸ ರೈಲುಗಳು ಸಂಚಾರ ಮಾಡುತ್ತಿವೆ. ರಾಜ್ಯದಲ್ಲಿ ರೈಲು ಸಂಚಾರಗಳ ಸಂಖ್ಯೆ ಹೆಚ್ಚಿಗೆ ಆಗಬೇಕಾದರೇ ಬಿಜೆಪಿಗೆ ಮತ ಕೊಡಿ. ಆಯುಷ್ಮಾನ ಭಾರತ ಯೋಜನೆಯಿಂದ ಬಡವರಿಗೆ ಅನಕೂಲ ಆಗುತ್ತಿದೆ. ಈ ಯೋಜನೆ ಮುಂದುವರೆಯಲು ಬಿಜೆಪಿ ಮತ ಹಾಕಿ. ಸಿದ್ದರಾಮಯ್ಯ ಪಿಎಫ್​ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಪಿಎಫ್ಐ ಬ್ಯಾನ್ ಮಾಡಿದ್ದರಿಂದ ರಾಜ್ಯದಲ್ಲಿ ಕ್ರೈಮ್ ಸಂಖ್ಯೆ ಕಡಿಮೆ ಆಗಿದೆ. ಬೊಮ್ಮಾಯಿಯವರಿಂದ ರಾಜ್ಯದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆ. ಇಂದು ರಾಜ್ಯದಲ್ಲಿನ ಅನೇಕ ಕ್ರಿಮಿನಲ್​ಗಳು ಜೈಲಿನಲ್ಲಿದ್ದಾರೆ ಎಂದು ಕೊಂಡಾಡಿದರು.

No Comments

Leave A Comment