ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪೂಂಚ್‌: ಬೆಂಕಿ ತಗುಲಿ ಹೊತ್ತಿ ಹುರಿದ ಭಾರತೀಯ ಸೇನಾ ವಾಹನ; ನಾಲ್ವರು ಯೋಧರು ಹುತಾತ್ಮ!

ಜಮ್ಮು: ಜಮ್ಮು ಕಾಶ್ಮೀರದ ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಹುರಿದಿದ್ದು ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ವರದಿಗಳ ಪ್ರಕಾರ, ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿದ್ದ ನಾಲ್ವರು ಯೋಧರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹುತಾತ್ಮರಾಗಿದ್ದಾರೆ. ಆದರೂ ಸೇನೆಯ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ. ಇದರೊಂದಿಗೆ ಯೋಧರ ವಾಹನಕ್ಕೆ ಬೆಂಕಿ ತಗುಲಿದ ಹಿಂದೆ ಭಯೋತ್ಪಾದಕರ ಸಂಚು ಇದೆಯೋ ಅಥವಾ ಅಪಘಾತವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸಿಕ್ಕಿರುವ ಮಾಹಿತಿಯ ಪ್ರಕಾರ, ಪೂಂಚ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸೇನಾ ವಾಹನದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಈ ಅಪಘಾತದಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾದ ಸುದ್ದಿ ಮುನ್ನೆಲೆಗೆ ಬಂದಿದೆ. ಆದರೆ, ಹುತಾತ್ಮ ಯೋಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ, ಪೂಂಚ್-ಜಮ್ಮು ರಾಷ್ಟ್ರೀಯ ಹೆದ್ದಾರಿಯ ಭಟದುಡಿಯನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಅಪಘಾತಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಹೊರಬಿದ್ದಿದೆ. ಇದರಲ್ಲಿ ಸೇನಾ ವಾಹನದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ಯೋಧರು ಹೊರಬರುವುದಕ್ಕೂ ಸಾಧ್ಯವಾಗದೇ ಸಾವನ್ನಪ್ಪಿದ್ದಾರೆ. ಇನ್ನು ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ.

No Comments

Leave A Comment