ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮಂಗಳೂರು: ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು
ಮಂಗಳೂರು:ಏ 20. ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.
ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.