ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ನಾಮಪತ್ರ ಅಂಗೀಕಾರ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್
ರಾಮನಗರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ.
ಆಸ್ತಿ ಹಾಗೂ ತೆರಿಗೆ ಲೆಕ್ಕಾಚಾರ ಸಮಸ್ಯೆಯಿಂದಾಗಿ ನಾಮಪತ್ರ ತಿರಸ್ಕೃತವಾಗುತ್ತದೆ ಎನ್ನುವ ಆತಂಕ ಡಿಕೆ.ಶಿವಕುಮಾರ್ ಅವರಿಗೆ ಎದುರಾಗಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ತಮ್ಮ ಸಹೋದರ ಡಿಕೆ.ಸುರೇಶ್ ಅವರಿಂದಲೂ ಕೊನೆ ಗಳಿಗೆಯಲ್ಲಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವಂತೆ ಮಾಡಿದ್ದರು.
ಏಪ್ರಿಲ್ 24 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಅಂದು ಡಿಕೆ ಸುರೇಶ್ ಅವರು ತಾವು ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.