ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಐದು ದಿನ ಮಳೆ ಸಾಧ್ಯತೆಯಿದ್ದು, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ವಿಜಯನಗರ, ಶಿವಮೊಗ್ಗ, ಹಾಸನ ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಕೋಲಾರ, ಚಿಕ್ಕಬಳ್ಳಾಪು ಸೇರಿದಂತೆ 15 ಜಿಲ್ಲೆಗಳಿಗೆ ಮಳೆಯ ಅಲರ್ಟ್​​ ಘೋಷಿಸಿದೆ. ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಂಭವವಿದೆ. ಮತ್ತು ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳಿಂದ ಮುನ್ಸೂಚನೆ ನೀಡಿಲಾಗಿದೆ.

ಉತ್ತರ ಒಳನಾಡಿಗೆ ಇಂದಿನಿಂದ ಮೂರು ದಿನ ಮಳೆ ಸಾಧ್ಯತೆಯಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕರಾವಾಳಿಗೆ ಇಂದಿನಿಂದ ಎರಡು ದಿನ ಮಳೆ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

No Comments

Leave A Comment