Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ರಾಮನಗರ: ಕುರಿ ತೊಳೆಯಲು ಹೋಗಿದ್ದಾಗ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ರಾಮನಗರ ‌ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಗೊಲ್ಲರಹಟ್ಟಿ ಗ್ರಾಮದ ಒಂದೇ ಕುಟುಂಬದ 35 ವರ್ಷದ ಜ್ಯೋತಿ, 30 ವರ್ಷದ ನಾಗರಾಜು ಮತ್ತು 22 ವರ್ಷದ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಕುರಿ ತೊಳೆಯುತ್ತಿದ್ದಾಗ ಯಾರೋ ಒಬ್ಬರು ಮುಳುಗಿದ್ದು ಅವರನ್ನು ರಕ್ಷಿಸಲು ಮುಂದಾದಾಗ ಈ ದುರಂತ ನಡೆದಿದೆ ಎನ್ನಲಾಗಿದೆ.

No Comments

Leave A Comment