Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಕಾಸರಗೋಡು: ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಾಗಾಟ – ನಾಲ್ವರ ಬಂಧನ

ಕಾಸರಗೋಡು:ಏ, 22. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ.

ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಉದುಮ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಬೆಂಗಳೂರಿನಿಂದ ಮಾದಕ ವಸ್ತುವನ್ನು ಸಾಗಾಟ ಮಾಡಿದ್ದಾಗಿ ಬಂಧಿತರು ವಿಚಾರಣೆ ವೇಳೆ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

No Comments

Leave A Comment