Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ನಿಶ್ಯಕ್ತಿಯಿಂದ ಬಳಲುತ್ತಿದ್ದ ಎಚ್‌ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು; ಚೇತರಿಸಿಕೊಳ್ಳುತ್ತಿದ್ದಾರೆ ಎಂದ ವೈದ್ಯರು

ಬೆಂಗಳೂರು: ನಿಶ್ಯಕ್ತಿ ಮತ್ತು ಅನಾರೋಗ್ಯದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ‘ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಭಾನುವಾರ ತಿಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಿಂದಾಗಿ ದಣಿವರಿವೆಯಿಲ್ಲದೆ ಪ್ರವಾಸ ಮಾಡುತ್ತಿದ್ದ 63 ವರ್ಷದ ನಾಯಕ ಜ್ವರದಿಂದ ಬಳಲುತ್ತಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಎಚ್‌ಡಿ ಕುಮಾರಸ್ವಾಮಿ ಅವರನ್ನು ಏಪ್ರಿಲ್ 22 ರಂದು ಸಂಜೆ ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಡಾ. ಸತ್ಯನಾರಾಯಣ ಮೈಸೂರು ಅವರು ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಬಳಲಿಕೆ ಮತ್ತು ಸಾಮಾನ್ಯ ಜ್ವರದ ಲಕ್ಷಣಗಳೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ಪರೀಕ್ಷೆಗಳು ಮತ್ತು ಚಿಕಿತ್ಸೆಯನ್ನು ನಡೆಸಲಾಗುತ್ತಿದೆ. ಅವರ ಆರೋಗ್ಯ ಸ್ಥಿರರಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕುಮಾರಸ್ವಾಮಿ ಅವರು ರಾಜ್ಯದಾದ್ಯಂತ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಆತಂಕಪಡಬೇಡಿ, ವಿಶ್ರಾಂತಿ ಪಡೆದ ನಂತರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಕುಮಾರಸ್ವಾಮಿ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕುಮಾರಸ್ವಾಮಿ ಅವರು ಈ ಹಿಂದೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

No Comments

Leave A Comment