Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಿಗೆ ನಿರಂಜನ ಜಂಗಮಪಟ್ಟಾಧಿಕಾರ; ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಅಭಿದಾನ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಇಂದು ಶ್ರೀಮಠದಲ್ಲಿ ಜಂಗಮಪಟ್ಟಾಧಿಕಾರ ಮಹೋತ್ಸವ ನೆರವೇರಿತು.

ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಯೋಗ ಪಟ್ಟ ನೀಡಲಾಗಿದೆ. ಸಿದ್ಧಗಂಗೆಯ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧ್ಯಕ್ಷರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಬಸವಜಯಂತಿ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಸಲಾಗಿದ್ದು, ಭಕ್ತಾದಿಗಳು ಭಾಗಿಯಾಗಿದ್ದರು.

ಇದೇ ವೇಳೆ ರಾಮನಗರ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠ ಹಾಗೂ ದೇವನಹಳ್ಳಿ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೂ ಸಭಾ ಕಾರ್ಯಕ್ರಮದಲ್ಲಿ ಅಭಿದಾನವನ್ನು ಘೋಷಣೆ ಮಾಡಲಾಗಿದ್ದು, ಬಂಡೆ ಮಠದ ಉತ್ತರಾಧಿಕಾರಿಗಳಿಗೆ ಶ್ರೀ ಮಹಾಲಿಂಗ ಸ್ವಾಮೀಜಿ, ದೇವನಹಳ್ಳಿಯ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೆ ಶ್ರೀ ಸದಾಶಿವ ಸ್ವಾಮೀಜಿ ಎಂಬ ಅಭಿದಾನ ನೀಡಲಾಗಿದೆ.

ಸಿದ್ಧಗಂಗೆಯ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಿರಾಭಾರಿ ನಿರಂಜನ ಜಂಗಮಪಟ್ಟಾಧಿಕಾರ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

No Comments

Leave A Comment