Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಬಸ್ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ, 22 ಮಂದಿಗೆ ಗಾಯ

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಆರಂಭಿಸಿದ್ದಾರೆ.

ಸಕ್ಕರೆ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನಗಳು ಪಲ್ಟಿಯಾಗಿದ್ದು, ನಜ್ಜುಗುಜ್ಜಾಗಿವೆ. ತಕ್ಷಣವೇ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಪಿಎಂಆರ್‌ಡಿಎಯಿಂದ ಒಂದು ರಕ್ಷಣಾ ವ್ಯಾನ್ ಸೇರಿದಂತೆ ಒಟ್ಟು 7 ಅಗ್ನಿಶಾಮಕ ವಾಹನಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು ಎಂದು ವರದಿಗಳಿಂದ ತಿಳಿದುಬಂದಿದೆ.

No Comments

Leave A Comment