Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಕಾಂಗ್ರೆಸ್ ತೊರೆದು ಬಿಎಸ್‌ಪಿ ಪಕ್ಷದಿಂದ ಕಣಕ್ಕಿಳಿದ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಏ 24. ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಪುಲಿಕೇಶಿ ನಗರ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ತೊರೆದು ಬಿಎಸ್‌ಪಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷವು ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡು ಕಣಕ್ಕಿಳಿಯಲಿದ್ದಾರೆ.

ಇನ್ನು 2018ರ ವಿಧಾನಸಭೆ ಚುನಾವಣೆಯಲ್ಲಿ 81 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೂ ಈ ಬಾರಿ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದರಿಂದ ಬೇಸರಗೊಂಡ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.

No Comments

Leave A Comment