ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆಯ ಅಗತ್ಯವಿದೆ: ಸುಪ್ರೀಂಗೆ ದೆಹಲಿ ಪೊಲೀಸರು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ “ಪ್ರಾಥಮಿಕ ತನಿಖೆ” ನಡೆಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಬಯಸಿದರೆ ಪೊಲೀಸರು ತಕ್ಷಣ ಎಫ್‌ಐಆರ್ ದಾಖಲಿಸುತ್ತಾರೆ. ಆದರೆ ಕೆಲವು ಸಮಸ್ಯೆಗಳಿದ್ದು, ಪೊಲೀಸರು ಅದನ್ನು ಪರಿಶೀಲಿಸಲು ಬಯಸಿದ್ದಾರೆ ಎಂದು ದೆಹಲಿ ಪೊಲೀಸರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದ್ದಾರೆ.

“ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆ ನಡೆಸುವ ಅಗತ್ಯ ಇದೆ. ಕೋರ್ಟ್ ಆದೇಶ ನೀಡಿದರೆ ತಕ್ಷಣ ಎಫ್‌ಐಆರ್ ದಾಖಲಿಸಬಹುದು ” ಎಂದು ಮೆಹ್ತಾ ಅವರು ಸುಪ್ರೀಂ ಪೀಠಕ್ಕೆ ತಿಳಿಸಿದ್ದಾರೆ.

ತುಷಾರ್ ಮೆಹ್ತಾ ಅವರ ಮನವಿಯನ್ನು ಪರಿಗಣಿಸಿದ ಸುಪ್ರೀಂ ಪೀಠ, ಪ್ರಕರಣಗಳಲ್ಲಿ ಇದೇ ರೀತಿಯ ಅರ್ಜಿಗಳನ್ನು ಪರಿಗಣಿಸುವ ಮೊದಲು ಇತರ ಕಡೆಯ ದೃಷ್ಟಿಕೋನವನ್ನು ಕೋರುತ್ತೇವೆ. ಆದರೆ ಈ ಪ್ರಕರಣ ವಿಭಿನ್ನವಾಗಿರುವುದರಿಂದ, ಶುಕ್ರವಾರ ಅಫಿಡವಿಟ್ ಮೂಲಕ ನಿಮ್ಮ ನಿಲುವನ್ನು ಪ್ರಸ್ತುತಪಡಿಸುವಂತೆ ಸಿಜೆಐ ದೆಹಲಿ ಪೊಲೀಸರಿಗೆ ಸೂಚಿಸಿದೆ.

ನಿನ್ನೆ ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸುತ್ತಿಲ್ಲ ಎಂದು ಏಳು ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತ್ತು.

No Comments

Leave A Comment